ಕುಂದಾಪುರ(ಡಿ,9): ಕನ್ನಡ ವಿಭಾಗ ಆಯೋಜಿಸಿದ ‘ಬೆಳದಿಂಗಳ ಚಿಂತನ’ ವಿಶಿಷ್ಟ ಕಾರ್ಯಕ್ರಮವನ್ನು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಹುಂತ್ರಿಕೆ ಸುಧಾಕರ್ ಶೆಟ್ಟಿಯವರು ಉದ್ಘಾಟಿಸಿದರು.
ಬೆಳದಿಂಗಳ ಚಿಂತನ ಕಾರ್ಯಕ್ರಮದ ಮಾಲಿಕೆ – ೧ ‘ವೃತ್ತಿ ಧರ್ಮ’ ವಿಷಯದ ಕುರಿತು ವಿಶ್ವ ಹಿಂದೂ ಪರಿಷತ್ ಕೇಂದ್ರೀಯ ವಿಶ್ವಸ್ಥ ಮಂಡಳಿಯ ಸದಸ್ಯರಾದ ಶ್ರೀ ಕಟ್ಕೆರೆ ಪ್ರೇಮಾನಂದ ಶೆಟ್ಟಿಯವರು ಉಪನ್ಯಾಸ ನೀಡಿದರು. ಶಿಕ್ಷಕರೆಂದರೆ ಕೇವಲ ಅಕ್ಷರ ಕಲಿಸುವವರಲ್ಲ, ಪಾಠ ಮಾಡುವವರಲ್ಲ, ಬುದ್ದಿವಾದ ಹೇಳುವವರಲ್ಲ, ಪದವಿ ನೀಡುವವರಲ್ಲ, ಉದ್ಯೋಗ ಕೊಡಿಸುವವರು ಮಾತ್ರವಲ್ಲ ಜೊತೆಗೆ ಬದುಕನ್ನು ಕಲಿಸುವವರು, ಯೋಚಿಸಲು ಪ್ರೇರೇಪಿಸುವವರು. ಶಿಕ್ಷಕ ತನ್ನ ವಿಷಯವನ್ನು ಮತ್ತು ತನ್ನ ವೃತ್ತಿಯನ್ನು ಪ್ರೀತಿಸಬೇಕು, ಅಸಾಧ್ಯವಾದರೂ ತನ್ನ ಮಕ್ಕಳನ್ನು ಪ್ರೀತಿಸುವುದಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಪ್ರೀತಿಸಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ನ ಅಧ್ಯಕ್ಷರಾದ ಶ್ರೀ ನೀಲಾವರ ಸುರೇಂದ್ರ ಅಡಿಗ ಮತ್ತು ಕನ್ನಡ ಉಪನ್ಯಾಸಕಿ ಶ್ರೀಮತಿ ಪ್ರವೀಣಾ ಎಮ್. ಪೂಜಾರಿ ಉಪಸ್ಥಿತರಿದ್ದರು.
ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿ, ಕನ್ನಡ ಉಪನ್ಯಾಸಕರಾದ ಶ್ರೀ ಸುಕುಮಾರ್ ಶೆಟ್ಟಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿ, ಕನ್ನಡ ಉಪನ್ಯಾಸಕಿ ಶ್ರೀಮತಿ ರೇಷ್ಮಾ ಶೆಟ್ಟಿ ನಿರೂಪಿಸಿದರು.ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ. ಅವರ ಸಂಯೋಜನೆಯಲ್ಲಿ ವಿದ್ಯಾರ್ಥಿಗಳು ಪ್ರಸಿದ್ಧ ಭಾವಗೀತೆಗಳನ್ನು ಹಾಡಿದರು.