ಕುಂದಾಪುರ.ಡಿಸೆಂಬರ್ 9. ಬೆಂಗಳೂರು ಕುಂದನಹಳ್ಳಿ ಗೇಟ್ ಹೆಚ್.ಎ.ಎಲ್ ಸಮೀಪ ಬೇಕರಿಯಲ್ಲಿ ನಡೆದ ಬಂಟ ಸಮುದಾಯದ ಯುವಕರ ಮೇಲೆ ಪುಡಿ ರೌಡಿಗಳಿಂದ ನೆಡೆದ ಮಾರಣಾಂತಿಕ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಘಟನೆಯನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘ ತೀವ್ರವಾಗಿ ಖಂಡಿಸಿದ್ದಾರೆ.
ಹೊಟ್ಟೆಪಾಡಿಗಾಗಿ ಕಷ್ಟಪಟ್ಟು ಸಾಲ ಮಾಡಿ ತಮ್ಮ ಜೀವನವನ್ನು ನಿರ್ವಹಣೆ ಮಾಡಲು ಬೆಂಗಳೂರಿಗೆ ಹೋದ ಇಂಥ ಯುವಕರ ಮೇಲೆ ಹಲ್ಲೆ ನಡೆಸಿದ ಪುಡಿ ರೌಡಿಗಳಿಗೆ ಉಗ್ರವಾದ ಶಿಕ್ಷೆಯಾಗಬೇಕೆಂದು ಕುಂದಾಪುರ ತಾಲೂಕು ಯುವ ಬಂಟರ ಸಂಘ ಆಗ್ರಹಿಸಿದೆ ಎಂದು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರಾದ ಬಿ ಉದಯ್ ಕುಮಾರ್ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಹೇಳಿಕೆಯನ್ನು ನೀಡಿರುತ್ತಾರೆ.