ಕುಂದಾಪುರ(ಡಿ,12): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಮೆದುಳು ಜ್ವರದ ವಿರುದ್ಧಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಕುಂದಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಮಕ್ಕಳಿಗೆ ಸಂಭವಿಸಬಹುದಾದ ಮೆದುಳುಜ್ವರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಜಪಾನೀಸ್ ಎನ್ಸೆಫಲೈಟಿಸ್ ಲಸಿಕೆಯನ್ನುಹಾಕಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ಉಪ ಪ್ರಾಂಶುಪಾಲೆ ಮತ್ತುಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆಎನ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.