ಕುಂದಾಪುರ (ಡಿ,23): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ಎನ್.ಎಸ್. ಎಸ್., ಎನ್. ಸಿ. ಸಿ. ಘಟಕ ಹಾಗೂ ಇಂಡಿಯನ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ, ಹೆಚ್. ಡಿ. ಎಫ್. ಸಿ. ಬ್ಯಾಂಕ್ ಕುಂದಾಪುರ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ ಡಿಸೆಂಬರ್ 17 ರಂದು ಜರಗಿತು.
ಇಂಡಿಯನ್ ರೆಡ್ ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಕ್ತದಾನದಲ್ಲಿ ಡಾ .ಬಿ. ಬಿ. ಹೆಗ್ಡೆ ಕಾಲೇಜಿನ ಕೊಡುಗೆ ಈ ಭಾಗದ ಅಗ್ರಗಣ್ಯ ಸಾಧನೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಎನ್.ಎಸ್.ಎಸ್. ಘಟಕದ ಕಾರ್ಯಕ್ರಮಾಧಿಕಾರಿ ಚೇತನ್ ಶೆಟ್ಟಿ ಕೊವಾಡಿ ಕಾಲೇಜು ವಿದ್ಯಾರ್ಥಿಗಳಲ್ಲಿ ರಕ್ತದಾನದ ಅರಿವು ಅತ್ಯವಶ್ಯಕ ಎಂದು ಹೇಳಿದರು .
ಲಯನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ನವೀನ್ ಕುಮಾರ್ ಶೆಟ್ಟಿ, ಪಾಸ್ಟ್ ಡಿಸ್ಟ್ರಿಕ್ಟ್ ಗವರ್ನರ್ ಪ್ರಕಾಶ್ ಟಿ. ಸೋನ್ಸ್, ಹೆಚ್. ಡಿ. ಎಫ್. ಸಿ. ಬ್ಯಾಂಕ್ ಕುಂದಾಪುರದ ಮ್ಯಾನೇಜರ್ ಮಂಜುನಾಥ್ ಶೆಟ್ಟಿ ಹಾಗೂ ಬ್ಯಾಂಕ್ ಸಿಬ್ಬಂದಿಗಳು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿಯ ಅಧ್ಯಕ್ಷರಾದ ಸತೀಶ್ ಸಾಲಿಯಾನ್ ಹಾಗೂ ಸದಸ್ಯರಾದ ಶರತ್ ಆನಗಳ್ಳಿ, ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಹ ಸಂಯೋಜಕರಾದ ಅವಿತಾ ಎಮ್., ಎನ್.ಸಿ.ಸಿ. ಘಟಕದ ಅಧಿಕಾರಿಗಳಾದ ಹರೀಶ ಬಿ, ಶರತ್ ಕುಮಾರ್ ಉಪಸ್ಥಿತರಿದ್ದರು.
ಕಾಲೇಜು ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ ಸ್ವಾಗತಿಸಿದರು. ಎನ್.ಎಸ್.ಎಸ್. ಘಟಕದ ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಕರ್ಯಕ್ರಮ ನಿರೂಪಿಸಿ ವಂದಿಸಿದರು.