ಕುಂದಾಪುರ ( ಡಿ,23) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಅಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಯಶಸ್ಸಿನ ತಂತ್ರಗಳ ಕುರಿತು ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಶ್ರಯದಲ್ಲಿ ನಡೆಯುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಯಶಸ್ವಿಯಾಗಿ ತೇರ್ಗಡೆಗೊಳ್ಳಲು ಬೇಕಾದ ತಂತ್ರಗಳ ಕುರಿತು ಸಂಪನ್ಮೂಲ ವ್ಯಕ್ತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇದರ ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಪ್ರಶಾಂತ್ ನೀಲಾವರ ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನರೇನ್ ಅಕಾಡೆಮಿ ಬ್ರಹ್ಮಾವರ ಇದರ ಸಹ ಸಂಸ್ಥಾಪಕ ಶ್ರೀ ಚಂದ್ರಕಾoತ್ ವಿ. ಪದವಿಯ ಜೊತೆಗೆ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯನ್ನು ನಡೆಸುವುದು ಸರ್ಕಾರಿ ಕ್ಷೇತ್ರದ ಉದ್ಯೋಗವನ್ನು ತಡೆಯಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ಉಪನ್ಯಾಸಕ ಸುಧೀರ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಮಹೇಶ್ ಕುಮಾರ್ ವಂದಿಸಿದರು. ವಾಣಿಜ್ಯ ಉಪನ್ಯಾಸಕಿ ಶ್ವೇತಾ ಭಂಡಾರಿ ನಿರೂಪಿಸಿದರು.