ಕುಂದಾಪುರ( ಜ,01): ಇಲ್ಲಿನ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪೂರ್ವಿಕಾ ರಾಜ್ಯಮಟ್ಟದ ಕಲೋತ್ಸವ 2022 ಸ್ಪರ್ಧೆಯ ಭರತನಾಟ್ಯ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನಗಳಿಸಿರುತ್ತಾಳೆ.
ಪೂರ್ವಿಕಾಳ ಈ ಕಲಾಸಾಧನೆಗೆ ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿ ಯವರು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ್ ಶೆಟ್ಟಿಯವರು ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಅಭಿನಂದಿಸಿದ್ದಾರೆ.