ಗಂಗೊಳ್ಳಿ (ಜ.02): ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಸಾಹಿತ್ಯ ತಂಗುದಾಣ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯದ ಪದವಿಪೂರ್ವ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಮಹಿಳಾ ದೌರ್ಜನ್ಯವನ್ನು ತಡೆಗಟ್ಟುವಲ್ಲಿ ನಮ್ಮ ಅರಿವು’ ಎನ್ನುವ ವಿಷಯದ ಕುರಿತಂತೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪವಿತ್ರ ಎನ್ ಮೊಗೇರಿ ಮತ್ತು ನಿಶಾ ಬಿ ಪೂಜಾರಿ ಇವರಿಗೆ ನಗದು ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಗೋಪಾಲ ಪೂಜಾರಿ ಸಾಹಿತ್ಯ ತಂಗುದಾಣದ ನಿರ್ವಾಹಕ ನರೇಂದ್ರ ಎಸ್ ಗಂಗೊಳ್ಳಿ ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಸ್ವಾತಿ ಆಚಾರಿ ಉಪಸ್ಥಿತರಿದ್ದರು.