ಕುಂದಾಪುರ( ಜ,6): ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬವಳಾಡಿಯಲ್ಲಿ ಡಿಸೆಂಬರ್ 25ರಿಂದ ಆರಂಭಗೊoಡ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಡಿಸೆಂಬರ್ರಂ31ದು ನಡೆಯಿತು.
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ ಶೆಟ್ಟಿಯವರು ಸಮಾರೋಪ ಭಾಷಣ ಮಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದರು. ಉದ್ಯಮಿ ವಾಜುರಾಜ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು. ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬವಳಾಡಿಯ ಹಳೆ ವಿದ್ಯಾರ್ಥಿ ಸಂಘದ ಗೌರವಧ್ಯಕ್ಷ ರಘುರಾಮ ಶೆಟ್ಟಿ, ಉದ್ಯಮಿ ರಮೇಶ್ ಪೂಜಾರಿ ಯಳಜಿತ್, ಕಾಲೇಜು ಗವರ್ನಿಂಗ್ ಕೌನ್ಸಿಲ್ ಸದಸ್ಯ ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ಶೇಖರ್ ಶೆಟ್ಟಿ ಗಾಯಾಡಿ, ಬೈಂದೂರು ರೋಟರಿ ಕ್ಲಬ್ನ ಮಾಜಿ ಅಧ್ಯಕ್ಷ ಮಂಜುನಾಥ ಶೆಟ್ಟಿ, ಗಣಪತಿ ಭಟ್ ಬವಳಾಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ತೋಳಾರ್, ವಿವೇಕಾನಂದ ಯುವಕ ಮಂಡಲ ಗಂಟಿಹೊಳೆಯ ಅಧ್ಯಕ್ಷ ಶ್ರೀಧರ್ ಶೆಟ್ಟಿ, ಪಂಚಾಯತ್ ಸದಸ್ಯೆ ಸೀತಾ, ಶಾಲೆಯ ಎಸ್.ಡಿ.ಎಮ್.ಸಿ. ಉಪಾಧ್ಯಕ್ಷೆ ನಾಗಮ್ಮ, ಶಾಲೆಯ ಮುಖ್ಯ ಶಿಕ್ಷಕ ಎನ್.ಕೆ. ಬಿಲ್ಲವ, ಎನ್.ಎಸ್.ಎಸ್. ಸ್ವಯಂ ಸೇವಕ ಪ್ರತಿನಿಧಿ ನಿತೇಶ್ ಶಾಸ್ತಿç, ಮೇಘನಾ ಶೆಟ್ಟಿ ಉಪಸ್ಥಿತರಿದ್ದರು.
ಈ ಸಂದರ್ಭ ಶಿಬಿರದ ಮುಖ್ಯ ಸಂಯೋಜಕರಾದ ವೀರೇಂದ್ರ ಶೆಟ್ಟಿ ಗಂಟಿಹೊಳೆ ಹಾಗೂ ಶಾಲೆಯ ಎಸ್.ಡಿ.ಎಮ್.ಸಿ. ಅಧ್ಯಕ್ಷ ರಾಘವೇಂದ್ರ ಗಾಣಿಗ, ವಕೀಲರಾದ ವಿಶ್ವನಾಥ ಶೆಟ್ಟಿ ಗಂಟಿಹೊಳೆ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ನಾಗರಾಜ್ ಪೂಜಾರಿ, ನಾಗರಾಜ್ ಪೂಜಾರಿ ಮೇಲ್ತಾರ್, ಮುಖ್ಯ ಶಿಕ್ಷಕ ಎನ್.ಕೆ. ಬಿಲ್ಲವ, ಸಂತೋಷ್ ಕುಲಾಲ್, ಪ್ರಾಕ್ತನ ವಿದ್ಯಾರ್ಥಿ ಸಂದೀಪ್ ಪೂಜಾರಿ, ರವಿರಾಜ್ ಶೆಟ್ಟಿ, ರವಿ ಶೆಟ್ಟಿ, ಶಿಕ್ಷಕರಾದ ಕಮಲ, ರಾಘವೇಂದ್ರ, ಶೇಖರ್ ಶೆಟ್ಟಿ, ಹಿರಿಯ ನಾಗರಿಕರಾದ ಭೋಜರಾಜ ಶೆಟ್ಟಿ ದೊಡ್ಮನೆ, ನಾರಾಯಣ ಶೆಟ್ಟಿ ಗಾಯಾಡಿಯವರನ್ನು ಗುರುತಿಸಲಾಯಿತು.
ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿ, ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಸ್ವಾಗತಿಸಿದರು. ನಿಕಟ ಪೂರ್ವ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ, ಸಹ ಕಾರ್ಯಕ್ರಮಾಧಿಕಾರಿ ರೇಷ್ಮಾ ಶೆಟ್ಟಿ ನಿರೂಪಿಸಿದರು.