ಕುಂದಾಪುರ( ಜ,26): ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಮತದಾರ ದಿನದ ಆಚರಣೆಯಲ್ಲಿ ನಿಕಟ ಪೂರ್ವ ಕಾರ್ಯಕ್ರಮಾಧಿಕಾರಿ ಮತ್ತು ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಇವರು ರಾಷ್ಟ್ರೀಯ ಮತದಾರರ ದಿನದ ಆಚರಣೆಯ ಮೂಲ ಉದ್ದೇಶ ಮತದಾನದ ಬಗ್ಗೆ ಜಾಗೃತಿ ಮತ್ತು ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಅರಿವು ಮೂಡಿಸಿ ಸ್ವಯಂಸೇವಕರಿಗೆ ಪ್ರತಿಜ್ಞೆ ಬೋಧಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಮತ್ತು ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಉಪಸ್ಥಿತರಿದ್ದರು. ಸ್ವಯಂಸೇವಕಿ ಶಬರಿ ಕಾರ್ಯಕ್ರಮ ನಿರೂಪಿಸಿದರು.