ಕುಂದಾಪುರ (ಫೆ.6): ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವುನಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಾಫ್ಟ್ ಬಾಲ್ ಪಂದ್ಯಾಟದಲ್ಲಿ ಸಮಗ್ರ ಪ್ರಥಮ ಸ್ಥಾನವನ್ನು ಗಳಿಸುವ ಮೂಲಕ ಬಿ.ಎಂ.ಎಸ್. ಪರ್ಯಾಯ ಪಾರಿತೋಷಕವನ್ನು ಪಡೆದುಕೊಂಡಿದೆ.
ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ , ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ರಂಜಿತ್ ಟಿ.ಎನ್. ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.