ಕುಂದಾಪುರ (ಫೆ.06): ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಇಂಡಿಯನ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
ಇಂಡಿಯನ್ ರೆಡ್ ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಯುವ ರೆಡ್ ಕ್ರಾಸ್ ಕಾರ್ಯವೈಕರಿಯಲ್ಲಿ ಇಂದಿನ ಯುವ ಪೀಳಿಗೆ ಹೇಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಯುಷ್ಧಾಮ ಆಸ್ಪತ್ರೆ ಕುಂದಾಪುರದ ವೈದ್ಯಕೀಯ ಅಧೀಕ್ಷಕರಾದ ಡಾ. ಸೋನಿ ಡಿ’ಕೋಸ್ಟ ಪ್ರಥಮ ಚಿಕಿತ್ಸೆ ತರಬೇತಿ ಮತ್ತು ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾಲೇಜು ವಿದ್ಯಾರ್ಥಿಗಳಲ್ಲಿ ಪ್ರಥಮ ಚಿಕಿತ್ಸೆ ಅರಿವು ಅತ್ಯವಶ್ಯಕ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಕಾರ್ಯದರ್ಶಿಯಾದ ಸೀತಾರಾಮ್ ಶೆಟ್ಟಿ, ಖಜಾಂಚಿಗಳಾದ ಶಿವರಾಮ್ ಶೆಟ್ಟಿ, ಸದಸ್ಯರಾದ ಗಣೇಶ್ ಆಚಾರ್,ಮುತ್ತಯ್ಯ ಶೆಟ್ಟಿ, ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಅಜಿತ್ ಹಾಗೂ ಶಿಲ್ಪ ಉಪಸ್ಥಿತರಿದ್ದರು.
ಕಾಲೇಜು ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶಾನುಭೋಗ ಸ್ವಾಗತಿಸಿ, ಪ್ರಾಸ್ತಾವಿಸಿದರು. ಯುವ ರೆಡ್ ಕ್ರಾಸ್ ಘಟಕದ ಸಹ ಸಂಯೋಜಕಿ ಶ್ರೀಮತಿ ಅವಿತಾ ಕೊರೆಯಾ ವಂದಿಸಿದರು. ವಿದ್ಯಾರ್ಥಿ ಕೀರ್ತನ ಕಾರ್ಯಕ್ರಮ ನಿರೂಪಿಸಿದರು.