ಗಂಗೊಳ್ಳಿ( ಫೆ. 20): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಫೆಬ್ರವರಿ.19 ರಂದು ನಡೆದ ಕುಂದಾಪುರ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ “ಗಂಗಾವಳಿ” ಯಲ್ಲಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಹವ್ಯಾಸಿ ಯಕ್ಷಗಾನ ಕಲಾವಿದ, ಉಪನ್ಯಾಸಕ ಶ್ರೀರಕ್ಷಿತ್ ರಾವ್ ಗುಜ್ಜಾಡಿಯವರನ್ನು ಸನ್ಮಾನಿಸಲಾಯಿತು.
ಕುಂದಾಪುರದ ಪ್ರತಿಷ್ಠಿತ ಡಾ| ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಉಪನ್ಯಾಸಕರಾಗಿರುವ ಇವರು ಹವ್ಯಾಸಿ ಯಕ್ಷಗಾನ ಕಲಾವಿದ, ಯಕ್ಷಗಾನ ತಾಳಮದ್ದಳೆ ಅರ್ಥಧಾರಿ, ರಂಗಭೂಮಿ ಆಸಕ್ತರು, ಸಾಹಿತ್ಯಾಸಕ್ತರು, ಹಲವು ಸಾಮಾಜಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಶ್ರೀ ಗುಹೇಶ್ವರ ಯಕ್ಷಗಾನ ಸಂಘದ ನಿರ್ದೇಶಕರಾಗಿ ಅನೇಕ ಪ್ರಸಂಗಗಳನ್ನು ನಿರ್ದೇಶಿಸಿದ ಅನುಭವ ಹೊಂದಿದ್ದು, ಕಾಲೇಜಿನಲ್ಲಿ ಪ್ರಾಧ್ಯಾಪಕರ ಹಾಗೂ ವಿದ್ಯಾರ್ಥಿಗಳ ಯಕ್ಷಗಾನ ತಂಡವನ್ನು ಕಟ್ಟಿ ಕುಂದಾಪುರ ಪರಿಸರದ ಹಲವಾರು ಕಡೆ ಯಶಸ್ವಿ ಪ್ರದರ್ಶನ ನೀಡಿದ್ದಾರೆ.