ಕುಂದಾಪುರ (ಫೆ ,28 ): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ವತಿಯಿಂದ ‘ವೈಯಕ್ತಿಕ ಹಣಕಾಸು ನಿರ್ವಹಣೆ’ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಇತ್ತೀಚೆಗೆ ನಡೆಸಲಾಯಿತು.
ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಎಮ್.ಎಸ್.ಎನ್. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಮಂಗಳೂರು ಇದರ ಅಸಿಸ್ಟೆಂಟ್ ಪ್ರೊಫೆಸರಾದ ಡಾ| ಶರಣ್ ಕುಮಾರ್ ಶೆಟ್ಟಿಯವರು ಆಗಮಿಸಿದ್ದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಶುಭ ಹಾರೈಸಿದರು. ಕಾರ್ಯಕ್ರಮ ಸಂಯೋಜಕರಾದ ಶ್ರೀ ರಾಜೇಶ್ ಶೆಟ್ಟಿ, ಶ್ರೀ ರಜತ್ ಬಂಗೇರ್ ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕರಾದ ಶ್ರೀ ರಾಜೇಶ್ ಶೆಟ್ಟಿ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ದೀಕ್ಷಾ ಪ್ರಾರ್ಥಿಸಿ, ಪಂಚಮಿ ವಂದಿಸಿ, ಪೂರ್ಣಿಮಾ ನಿರೂಪಿಸಿದರು.