ಉಡುಪಿ (ಫೆ,28): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿoಗ್ ವಿಭಾಗದ ಪ್ರಾಧ್ಯಾಪಕರಾದ ಶ್ರೀ ಮಂಜುನಾಥ್ ಎಸ್ ಇವರು ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿo ಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ರಾಮಕೃಷ್ಣ ಎನ್ ಹೆಗ್ಡೆ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಡೆವೆಲಪ್ಮೆಂಟ್ ಆಫ್ ಎ ಡ್ಯುಯಲ್ ಸ್ವಿರ್ಲ್ ಚೇಂಬರ್ ಫಾರ್ ಆ್ಯನ್ ಐಡಿ ಇಂಜಿನ್ ಆ್ಯಂಡ್ ಇನ್ವೆಸ್ಟಿಗೇಷನ್ ಆನ್ ಇಟ್ಸ್ ಇಪೆಕ್ಟ್ ಆನ್ ಎಂಜಿನ್ ಫರ್ಫಾರ್ಮೆನ್ಸ್ ಯುಸಿಂಗ್ ಎ ಬಯೋಡೀಸೆಲ್ ಬ್ಲೆಂಡ್” ಎಂಬ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಪ್ರಾಧ್ಯಾಪಕರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.