ಗಂಗೊಳ್ಳಿ(ಮಾ.03): ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಕ್ಲಬ್ ಬೈಲಹೊಂಗಲ ಇವರ ವತಿಯಿಂದ ಕಳೆದ ನವೆಂಬರ್ ನಲ್ಲಿ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಪ್ರಥಮ ಮಹಿಳಾ ಸೈನ್ಯವನ್ನು ಕಟ್ಟಿದ ಬೆಳವಡಿ ರಾಣಿ ಮಲ್ಲಮ್ಮ ಕುರಿತಾದ ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಅವರ ‘ವೀರರಾಣಿ ಬೆಳವಡಿ ಮಲ್ಲಮ್ಮ’ ಹೆಸರಿನ ಕವಿತೆಗೆ ನಗದು ಬಹುಮಾನ ಪುರಸ್ಕಾರ ಲಭಿಸಿದೆ. ತಮ್ಮ ವೈವಿಧ್ಯಮಯ ಬರಹಗಳ ಮೂಲಕ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡಿರುವ ನರೇಂದ್ರ ಎಸ್ ಗಂಗೊಳ್ಳಿ ಅವರ ಅಂಕಣ ಬರಹಗಳ ಸಂಕಲನ ‘ಹೇಳದೆ ಹೋದ ಮಗಳಿಗೆ’ ಮತ್ತು ಕಥಾ ಸಂಕಲನ ‘ನಾಯಿ ನಾನು ‘ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.