ಹೆಮ್ಮಾಡಿ (ಮಾ.23): ಉಡುಪಿ ಜಿಲ್ಲೆಯ ಪ್ರಮುಖ ಪೌರಾಣಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಬಗ್ವಾಡಿಯ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ಕ್ಷೇತ್ರದ ವಠಾರದಲ್ಲಿ ಮಾರ್ಚ್ 25 ಹಾಗೂ 26ರಂದು ನೂತನವಾಗಿ ನಿರ್ಮಿಸಲಾಗಿರುವ ಶ್ರೀ ನಾಗ ದೇವರು ಮತ್ತು ಪರಿವಾರ ದೇವರುಗಳ ಪ್ರತಿಷ್ಠಾಪನ ಕಾರ್ಯಕ್ರಮ ನೆರವೇರಲಿದೆ.
ಮಾರ್ಚ್ ,25 ರಂದು ವಿದ್ವಾನ್ ಕೋಟ ಚಂದ್ರಶೇಖರ ಸೋಮಯಾಜಿ ಯವರ ನೇತೃತ್ವದಲ್ಲಿ ವಿವಿಧ ಪೂಜಾಧಿ ಕಾರ್ಯಕ್ರಮ ಹಾಗೂ ಮಾರ್ಚ್, 26 ಶುಭ ಲಗ್ನ ಸುಮೂರ್ತದಲ್ಲಿ ಶ್ರೀ ನಾಗ ದೇವರು ಹಾಗೂ ಪರಿವಾರ ದೇವರುಗಳ ಪ್ರತಿಷ್ಠಾಪನೆ ಮತ್ತು ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಲಿದೆ.
ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.