ಕುಂದಾಪುರ( ಏ.01): ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ.ಎಂ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಯುಕೆಜಿ ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ ಡೇ ನಡೆಯಿತು .
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾIಬಿ. ಬಿ ಹೆಗ್ಡೆ ಕಾಲೇಜು ಕುಂದಾಪುರ ಇಲ್ಲಿನ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ನಂದಾ ರೈ ಮಕ್ಕಳ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಶಿಕ್ಷಕರ ಜೊತೆ ಪೋಷಕರ ಪಾತ್ರವೂ ಅತಿ ಮಹತ್ವವಾದದ್ದು ಎಂದು ತಿಳಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ಮುಖ್ಯ ಶಿಕ್ಷಕಿ ಲತಾ ಜಿ ಭಟ್, ಅಕಾಡೆಮಿಕ್ ಕೋ ಆರ್ಡಿನೇಟರ್ ವಿಲ್ಮಾ ಡಿ ಸಿಲ್ವಾ, ಸಂಯೋಜಕ ಶಿಕ್ಷಕಿ ಆರತಿ, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿ ದಿವ್ಯ ನಜರತ್ ಕಾರ್ಯಕ್ರಮವನ್ನು ನಿರೂಪಿಸಿದರು.