ಹೆಮ್ಮಾಡಿ(ಎ,06): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಅಂಬಲಪಾಡಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಹೆಮ್ಮಾಡಿ, ರಕ್ತನಿಧಿ ಕೆಎಂಸಿ ಆಸ್ಪತ್ರೆ ಮಣಿಪಾಲ ಇವರ ನೇತೃತ್ವದಲ್ಲಿ ಏಪ್ರಿಲ್, 09 ರ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಮತ್ಸಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ.
ಶ್ರೀ ಲಕ್ಷ್ಮೀನಾರಾಯಣ ರಿಕ್ಷಾ ಚಾಲಕರು ಹಾಗೂ ಮಾಲಕರ ಸಂಘ ಹೆಮ್ಮಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಂಡ್ಸೆ ವಲಯ, ಜೆ.ಸಿಐ ಕುಂದಾಪುರ ಸಿಟಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಈ ರಕ್ತದಾನ ಶಿಬಿರ ಆಯೋಜಿಸಲಾಗಿದೆ.