ಕುಂದಾಪುರ(ಎ:06): ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ “ESPERANZA 2K23” ಫ್ರೆಶರ್ಸ್ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ದ್ವಿತೀಯ ವರ್ಷದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಆದರದಿಂದ ಸ್ವಾಗತಿಸಿಕೊಂಡರು. ವಿದ್ಯಾರ್ಥಿಗಳು ವಿವಿಧ ಮನೋರಂಜನಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಜೆನಿಫರ್ ಫ್ರೀಡಾ ಮಿನೇಜೆಸ್ ಹಾಗೂ ಐ.ಎಂ.ಜೆ. ಸಮೂಹ ವಿದ್ಯಾಸಂಸ್ಥೆಯ ನಿರ್ದೇಶಕರಾದ ಪ್ರೊಫೆಸರ್ ದೋಮ ಚಂದ್ರಶೇಖರ್ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಐ.ಎಂ.ಜೆ.ಐ.ಎಸ್.ಸಿ. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ಮತ್ತು ಬೋಧಕ – ಬೋಧಕೇತರ ವೃಂದದವರು ಉಪಸ್ಥಿತರಿದ್ದು, ವಿದ್ಯಾರ್ಥಿನಿ ಕುಮಾರಿ ನಿತ್ಯ ಸ್ವಾಗತಿಸಿ, ಕುಮಾರಿ ಗಾಯತ್ರಿ ಧನ್ಯವಾದ ಸಮರ್ಪಣೆ ಮಾಡಿದರು. ವಿದ್ಯಾರ್ಥಿನಿ ಕುಮಾರಿ ಶೇರಿಲ್ ಸಾರ ಕಾರ್ಯಕ್ರಮವನ್ನು ನಿರೂಪಿಸಿದರು.