ಹೆಮ್ಮಾಡಿ( ಎ,21): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದೆ.
ಕಾಲೇಜಿನ ವಿಜ್ಞಾನ ವಿಭಾಗದ 116 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 56 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ,ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ವಾಣಿಜ್ಯ ವಿಭಾಗದ 15 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.ವಿಜ್ಞಾನ ವಿಭಾಗದ ಐಶ್ವರ್ಯ ಖಾರ್ವಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 6ನೇ ರ್ಯಾಂಕ್ ಪಡೆದಿರುತ್ತಾಳೆ.
ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ,ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.