ಕುಂದಾಪುರ( ಎ,21): ಪದವಿ ಪೂರ್ವ ಶಿಕ್ಷಣ ಇಲಾಖೆಯ ದ್ವೀತಿಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ನಡೆಸಿದ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕುಂದಾಪುರ ಎಕ್ಸಲೆಂಟ್ ಪಿ.ಯು ಕಾಲೇಜಿನ 5 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ರ್ಯಾಂಕ್ ಪಡೆದಿದ್ದು ಸಂಸ್ಥೆಗೆ ಹೆಮ್ಮೆ ತಂದಿರುತ್ತಾರೆ.
ಸಂಸ್ಥೆಯ ವಿದ್ಯಾರ್ಥಿನಿ ವಾಸವಿ ಬೋಳಾರ್ ವಿಜ್ಞಾನ ವಿಭಾಗದಲ್ಲಿ 592 ಅಂಕ ಪಡೆದು ರಾಜ್ಯಕ್ಕೆ 5ನೇ ರ್ಯಾಂಕ್ ಹಾಗೂ ಉಡುಪಿ ಜಿಲ್ಲೆಗೆ 3ನೇ ರ್ಯಾಂಕ್ ಪಡೆದಿರುತ್ತಾಳೆ. ಪ್ರಸ್ತುತ ಎಕ್ಸಲೆಂಟ್ ಪಿ.ಯು ಕಾಲೇಜಿನಲ್ಲಿ ಪಿ.ಸಿ.ಎಮ್.ಸಿ ವಿಭಾಗದಲ್ಲಿ ಅಭ್ಯಾಸಿಸಿರುತ್ತಾಳೆ.
ಸಂಸ್ಥೆಯ ವಿದ್ಯಾರ್ಥಿ ಅಮೋಘ ಶೆಟ್ಟಿ ವಾಣಿಜ್ಯ ವಿಭಾಗದಲ್ಲಿ 591 ಅಂಕ ಪಡೆದು ರಾಜ್ಯಕ್ಕೆ 7ನೇ ರ್ಯಾಂಕ್ ಹಾಗೂ ಉಡುಪಿ ಜಿಲ್ಲೆಗೆ 4ನೇ ಸ್ಥಾನಿಯಾಗಿ ಹೊರಹೊಮ್ಮುವುದರ ಜೊತೆಗೆ ಮೂರು ವಿಷಯಗಳಲ್ಲಿ 100 ಕ್ಕೆ 100 ಅಂಕಗಳನ್ನು ಗಳಿಸಿರುತ್ತಾನೆ.
ಸಂಸ್ಥೆಯ ವಿದ್ಯಾರ್ಥಿಗಳಾದ ಸ್ನೇಹ 590 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ 8ನೇ ರ್ಯಾಂಕ್ಗಳಿಸಿ ಉಡುಪಿ ಜಿಲ್ಲೆಗೆ 5ನೇ ಸ್ಥಾನಿಯಾಗಿ ಹೊರ ಹೊಮ್ಮಿದರೆ, ಪ್ರಣಿತಾ ಅಡಿಗ 588 ಅಂಕಗಳನ್ನು ಪಡೆಯುವುದರ ಮೂಲಕ 9ನೇ ರ್ಯಾಂಕ್ ಹಾಗೂ ಶ್ರೀನಿಧಿ ಶೆಟ್ಟಿ 587 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ 10ನೇ ಸ್ಥಾನಿಯಾಗಿ ಹೊರ ಹೊಮ್ಮಿದ್ದಾಳೆ.
ಸಂಸ್ಥೆಯ ಒಟ್ಟು 225 ವಿದ್ಯಾರ್ಥಿಗಳಲ್ಲಿ 143 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಸಂಸ್ಥೆಯ 69 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ಉತ್ತಮ ಸಾಧನೆಯನ್ನು ತೋರ್ಪಡಿಸಿದ್ದಾರೆ. ಸಂಸ್ಥೆಯ 44 ವಿದ್ಯಾರ್ಥಿಗಳು ಶೇಕಡಾ 95 ಕ್ಕಿಂತ ಅಧಿಕ ಅಂಕ ಗಳಿಸುವುದರ ಮೂಲಕ ಸಂಸ್ಥೆ ಮತ್ತು ತಮ್ಮ ಪೋಷಕರು ಹೆಮ್ಮೆಪಡುವಂತ ಫಲಿತಾಂಶವನ್ನು ನೀಡಿರುತ್ತಾರೆ.
ಸಂಸ್ಥೆಯ ವಿದ್ಯಾರ್ಥಿಗಳಿಗೆ ನಿರಂತರವಾಗಿ ಎರಡು ವರ್ಷಗಳ ಕಾಲ ರಾಜ್ಯದ ನಾನಾ ವಿಭಾಗಗಳ ಅನುಭವಿ ಶಿಕ್ಷಕರ ನೆರವಿನಿಂದ ಗುಣಮಟ್ಟದ ಶಿಕ್ಷಣವನ್ನು ಎಕ್ಸಲೆಂಟ್ ಪಿ.ಯು ಕಾಲೇಜು ತನ್ನ ವಿದ್ಯಾರ್ಥಿಗಳಿಗೆ ನೀಡಿದ್ದು, ಇದು ಇಂದು ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ರ್ಯಾಂಕ್ ಗಳನ್ನು ಪಡೆಯಲು ಸಹಕಾರಿಯಾಗಿದೆ ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ ಶೆಟ್ಟಿ, ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಮತ್ತು ಖಜಾಂಚಿ ಭರತ್ ಶೆಟ್ಟಿ ತಿಳಿಸಿದ್ದಾರೆ. ಮತ್ತು ಎಲ್ಲಾ ವಿದ್ಯಾರ್ಥಿಗಳಿಗೂ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರಿಗೂ ಎಂ.ಎo ಹೆಗ್ಡೆ ಎಜುಕೇಶನಲ್ & ಚಾರಿಟೆಬಲ್ ಟ್ರಸ್ಟ್ ನ ಅಧ್ಯಕ್ಷರಾದ ಎಂ ಮಹೇಶ್ ಹೆಗ್ಡೆಯವರು ಅಭಿನಂದನೆ ತಿಳಿಸಿದ್ದಾರೆ.