ಕುಂದಾಪುರ(ಮೇ ,4): ಆರ್ಕಿಟೆಕ್ಟರ್ ಇಂಜಿನಿಯರಿoಗ್ಗೆ ಸೇರ್ಪಡೆ ಬಯಸುವ ವಿದ್ಯಾರ್ಥಿಗಳಿಗಾಗಿ ಎಪ್ರಿಲ್ 2023 ರಲ್ಲಿ ನಡೆದ ಪ್ರಥಮ ಹಂತದ ನಾಟಾ ಪರೀಕ್ಷೆಯಲ್ಲಿ ಕುಂದಾಪುರದ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವೈಷ್ಣವಿ ಶೆಟ್ಟಿ ಎಚ್ ಹಾಗೂ ಭೂಮಿಕಾ ಇವರು ನಾಟಾ ಪರೀಕ್ಷೆಗೆ ಹಾಜರಾಗಿ ಉತ್ತಮ ಅಂಕಗಳೊoದಿಗೆ ಉತ್ತೀರ್ಣರಾಗಿದ್ದಾರೆ.
ಎಕ್ಸಲೆಂಟ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರಥಮ ಪಿ. ಯು. ಸಿ ಯಿಂದಲೇ ಸಿ.ಇ.ಟಿ/ನೀಟ್, ಜೆಇಇ , ನಾಟಾ , ಸಿಎ/ ಸಿಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ವಿಶೇಷವಾಗಿ ತರಬೇತಿ ನೀಡಲಾಗುತ್ತದೆ.
ನಾಟಾ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ಸಾಧನೆ ಮಾಡಿದ ಸಾಧಕ ವಿದ್ಯಾರ್ಥಿಗಳನ್ನು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ , ಕಾರ್ಯದರ್ಶಿಗಳಾದ ಪ್ರತಾಪಚಂದ್ರ ಶೆಟ್ಟಿ, ಖಜಾಂಚಿಗಳಾದ ಭರತ್ ಶೆಟ್ಟಿ ಹಾಗೂ ಎಂ.ಎo ಹೆಗ್ಡೆ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಎಂ ಮಹೇಶ್ ಹೆಗ್ಡೆ, ಉಪನ್ಯಾಸಕ ವೃಂದದವರು, ಬೋಧಕೇತರ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭಹಾರೈಸಿದ್ದಾರೆ.