ಕುಂದಾಪುರ : (ಮೇ 15): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ರ್ಜೆ ಕಾಲೇಜಿನ ವಿಜ್ಞಾನ ಮತ್ತು ಗಣಕ ವಿಜ್ಞಾನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಮತ್ತು ತಂತ್ರಜ್ಞಾನ ವಿಭಾಗದ ಭೇಟಿ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ವಿಶ್ವ ವಿದ್ಯಾನಿಲಯದ ಡೇಟಾ ಸೆಂಟರ್ ಹಾಗೂ ಮೈಕ್ರೋಟ್ರೋನ್ ಸೆಂಟರ್ ಗೆ ಭೇಟಿ ನೀಡಿ ಅಲ್ಲಿನ ಕಾರ್ಯವಿಧಾನಗಳ ಬಗ್ಗೆ ವಿದ್ಯಾರ್ಥಿಗಳು ಮಾಹಿತಿಯನ್ನು ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ಮಂಗಳಗಂಗೋತ್ರಿ ಗ್ರಂಥಾಲಯಕ್ಕೆ ಭೇಟಿ ನೀಡಿದ ಅಲ್ಲಿನ ಗ್ರಂಥಾಲಯ ನಿರ್ವಹಣೆ ಹಾಗೂ ದತ್ತಾಂಶಗಳ ನಿರ್ವಹಣೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದರು. ವಿಶ್ವವಿದ್ಯಾನಿಲಯದ ಡೇಟಾ ಸೆಂಟರ್ ನ ಮುಖ್ಯಸ್ಥೆ ಶ್ರೀಮತಿ ಶಶಿರೇಖಾ, ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಶ್ರೀ ಹರೀಶ್ ಕಾಂಚನ್, ಶ್ರೀಕಾಂತ್ ಮತ್ತು ಮೇಘಾ ಉಪಸ್ಥಿತರಿದ್ದರು.