ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುವತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಫೆಬ್ರವರಿ 10 ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಫೆಬ್ರವರಿ 12 ರ ಒಳಗೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರಾಂಶುಪಾಲರ ದೃಢೀಕರಣದೊಂದಿಗೆ ಸಂಬಂಧಪಟ್ಟ ತಾಲೂಕು ಹಿಂದುಳಿದ ವರ್ಗಗಳ ಕಚೇರಿಗೆ ಸಲ್ಲಿಸಲು ಇಲಾಖೆಯಿಂದ ತಿಳಿಸಲಾಗಿದೆ.