ಕುಂದಾಪುರ,(ಜೂನ್ 15): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ವತಿಯಿಂದ ‘ಪಾನ್ ಕಾರ್ಡ್ ಮೇಳ’ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಶ್ರೀ ಮಹಲಾಸ ಕಂಪ್ಯೂಟರ್ ಅಕಾಡೆಮಿ, ಕುಂದಾಪುರ ಇದರ ಮಾಲೀಕರಾದ ಶ್ರೀ ಸಂತೋಷ್, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಸಂಘಟಕರಾದ ಶ್ರೀ ರಾಜೇಶ್ ಶೆಟ್ಟಿ ವಕ್ವಾಡಿ, ಶ್ರೀ ರಜತ್ ಬಂಗೇರ ಉಪಸ್ಥಿತರಿದ್ದರು.