ಕುಂದಾಪುರ (ಜೂ,22): ) : ಶ್ರೀ ಬಿ ಎಂ ಸುಕುಮಾರ ಶೆಟ್ಟಿ ಯವರ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಜೂನ್ 21 ರಂದು ವಿಶ್ವ ಯೋಗ ದಿನಾಚರಣೆ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಇಶಾ ಫೌಂಡೇಶನ್ ನ ಯೋಗ ಗುರುಗಳಾದ ಶ್ರೀ ಪ್ರವೀಣ್ ಕುಮಾರ್ ರವರು ಮಾತನಾಡಿ, ಪ್ರಾಚೀನ ಭಾರತೀಯ ಸಂಪ್ರದಾಯದ ಅತ್ಯಮೂಲ್ಯವಾದಂತಹ ಕೊಡುಗೆ ಯೋಗ. ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವಲ್ಲಿ ಯೋಗವು ಪ್ರಮುಖವಾದಂತಹ ಪಾತ್ರವನ್ನು ವಹಿಸುತ್ತದೆ. ದಿನನಿತ್ಯದ ಯೋಗಾಭ್ಯಾಸದಿಂದ ಮಕ್ಕಳಿಗೆ ಏಕಾಗ್ರತೆ ಶಿಸ್ತು ಸಂಯಮ ವನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂಬುದಾಗಿ ತಿಳಿಸಿದರು. ಸಂಸ್ಥೆಯ ವತಿಯಿಂದ ಮುಖ್ಯ ಅತಿಥಿಗಳನ್ನು ಸನ್ಮಾನಿಸಲಾಯಿತು.
ಶಾಲಾ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ಅಧ್ಯಕ್ಷತೆಯನ್ನು ವಹಿಸಿದ್ದು ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ ಎನ್ ,ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಜಗದೀಶ್ ಆಚಾರ್ ಸಾಸ್ತಾನ , ಪ್ರೌಢಶಾಲಾ ಸಹಾಯಕ ಮುಖ್ಯ ಶಿಕ್ಷಕ ಶ್ರೀ ಚಂದ್ರಶೇಖರ್ ಶೆಟ್ಟಿ, ಶಾಲೆಯ ಮುಖ್ಯ ಶಿಕ್ಷಕಿ ಲತಾ ಜಿ ಭಟ್ ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀದೇವಿ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಾಥಮಿಕ ವಿಭಾಗದ ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್ ಕಾರ್ಯಕ್ರಮವನ್ನು ಸಂಯೋಜಿಸಿದರು.