ಕೊಲ್ಲೂರು(ಜೂ,22): ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕ, ಶ್ರೀ ಮೂಕಾಂಬಿಕಾ ದೇವಳದ ಅನುದಾನಿತ ಪ್ರೌಢಶಾಲೆ ಕೊಲ್ಲೂರು, ವರಸಿದ್ದಿವಿನಾಯಕ ಪದವಿ ಪೂರ್ವ ಕಾಲೇಜು ಕೆರಾಡಿ ಹಾಗೂ ಈಶಾ ಪೌಂಡೇಶನ್ ಕೊಯಮುತ್ತೂರು ಇವರ ಜಂಟಿ ಆಶ್ರಯದಲ್ಲಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ವಿಶ್ವ ಯೋಗ ದಿನ ಆಚರಿಸಲಾಯಿತು.
.ಈ ಕಾರ್ಯಕ್ರಮವನ್ನು ಪ್ರಸನ್ನಾ ಆಂಜನೇಯ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಧರ್ಮದರ್ಶಿಗಳು ಆದ ಶ್ರೀಯುತ ರಾಘವನ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಬೌದ್ದಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಅತೀ ಅವಶ್ಯಕ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಡಬೇಕೆಂದು ಶುಭಾಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ ಶೆಟ್ಟಿ ವಹಿಸಿ ಯೋಗವು ಭಾರತ ವಿಶ್ವಕ್ಕೆ ನೀಡಿದ ಒಂದು ಶ್ರೇಷ್ಠ ಕೊಡುಗೆ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ದೇವಳದ ಕಾರ್ಯನಿರ್ವಾಹಣಾಧಿಕಾರಿಗಳಾದ ರವಿ ಕೊಟ್ಟಾರಗಸ್ತಿ, ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಡಾ.ರಾಮಚಂದ್ರ ಅಡಿಗ, ಡಾ ಅತುಲ್ ಕುಮಾರ್ ಶೆಟ್ಟಿ, ಶ್ರೀಮತಿ ರತ್ನ ರಮೇಶ್, ಕೆರಾಡಿ ಪ.ಪೂ ಕಾಲೇಜಿನ ನಿರ್ದೇಶಕರಾದ ಡಾ. ಮೋಜುನಾಥ ಗಾಣಿಗ, ಸುನಿಲ್ ಚಿತ್ತಾಲ್ ಕೆರಾಡಿ ಪ ಪೂ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಕುಮಾರ್ ಶೆಟ್ಟಿ, ಈಶಾ ಪೌಂಡೇಶನ್ ಅಧ್ಯಾಪಕರಾದ ಪ್ರವೀಣ್ ಕುಮಾರ್ ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಾ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ.ಬಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಸಮಾಜಶಾಸ್ತ್ರ ಉಪನ್ಯಾಸಕರಾದ ನಾಗರಾಜ ಅಡಿಗ ಕಾರ್ಯಕ್ರಮ ನಿರೂಪಿಸಿ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರಾದ ಹೊಸಮಠ ಸುಕೇಶ್ ಶೆಟ್ಟಿ ವಂದನಾರ್ಪಣೆ ಗೈದರು. ಸಭಾ ಕಾರ್ಯಕ್ರಮದ ನಂತರ ಈಶಾ ಪೌಂಡೇಶನ್ ಕೊಯಮುತ್ತೂರು ಇದರ ಯೋಗ ಶಿಕ್ಷಕರಾದ ಪ್ರವೀಣ್ ಕುಮಾರ್ ಇವರಿಂದ ಯೋಗ ಪ್ರಾತ್ಯಕ್ಷಿಕೆ ನಡೆಯಿತು.