ಕುಂದಾಪುರ (ಜೂ,29): ಇಂದು ಬದುಕು ಗೊತ್ತುಗುರಿ ಇಲ್ಲದೆ ಓಡುತ್ತಿದೆ; ಹಾಗಾಗಬಾರದು. ಬದುಕಲ್ಲಿ ಗುರಿ ಇರಬೇಕು. ಕಷ್ಟಗಳನ್ನು ಎದುರಿಸಿ ಎದೆಗುಂದದೆ ಛಲದಿಂದ ಮುಂದುವರಿದಾಗ ಗೆಲುವು ನಮ್ಮದಾಗುತ್ತದೆ. ಜೊತೆಯಲ್ಲಿ ಇಂತಹ ಗೆಲುವು ಸಾಧಿಸಬೇಕಾದರೆ ನಮ್ಮಲ್ಲಿ ಗುರಿ ಇಟ್ಟುಕೊಂಡು ಮುಂದೆ ಸಾಗುವುದು ಬಹಳ ಮುಖ್ಯ. ಇಲ್ಲವಾದಲ್ಲಿ ಮೌಸ್ ಮತ್ತು ಕೀಲಿಮಣೆ ಇಲ್ಲದ ಕಂಪ್ಯೂಟರ್ನoತೆ ಆಗುತ್ತದೆ. ಹಾಗೆ ನಮಗೆ ನಾವೇ ಪ್ರೇರಣೆಯಾಗಬೇಕು ಎಂದು ಖ್ಯಾತ ಸಂಪನ್ಮೂಲ ವ್ಯಕ್ತಿ ಶಿರಿಯಾರ ಗಣೇಶ್ ನಾಯಕ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ ನೇತೃತ್ವದ ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಜೂನ್ರಂ,27 ರಂದು ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ “ಸಮಯ ಪರಿಪಾಲನೆ ಮತ್ತು ಅಧ್ಯಯನ ಕೌಶಲ” ಕುರಿತ ಕಾರ್ಯಗಾರದಲ್ಲಿ ಖ್ಯಾತ ಸಂಪನ್ಮೂಲ ವ್ಯಕ್ತಿ ಶಿರಿಯಾರ ಗಣೇಶ್ ನಾಯಕ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಅಧ್ಯಯನ ಕೌಶಲದ ಕುರಿತು ತರಬೇತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ವಹಿಸಿದ್ದರು. ಉಪಪ್ರಾಂಶುಪಾಲೆ ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್., ಪ್ರಾಸ್ತಾವಿಕ ಮಾತಿನೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಪ್ರೌಢ ಶಾಲಾ ಸಹಾಯಕ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಜಗದೀಶ್ ಆಚಾರ್, ಪೂರ್ವ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಲತಾ ಜಿ. ಭಟ್ ಉಪಸ್ಥಿತರಿದ್ದರು.