ಕುಂದಾಪುರ(ಜು 01): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಜುಲೈ 01ರ ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಕುಂದಾಪುರದಲ್ಲಿ ಪ್ರಸಿದ್ಧ ಮಕ್ಕಳ ರೋಗ ತಜ್ಞರಾಗಿ ನಾಲ್ಕು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಸಮಾಜದಲ್ಲಿ ವಿಶೇಷ ಜನಮನ್ನಣೆ ಪಡೆದ ಹಿರಿಯ ಮಕ್ಕಳ ರೋಗ ತಜ್ಞರಾದ ಶ್ರೀ ಡಾ. ಬಿ. ರಾಜೇಂದ್ರ ಶೆಟ್ಟಿ ಯವರನ್ನು ಅವರ ಕುಂದಾಪುರದ ಚಿಕಿತ್ಸಾಲಯದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಸನ್ಮಾನಿಸಿ ಗೌರವಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ನಿತೀಶ್ ಶೆಟ್ಟಿ ಬಸ್ರೂರು, ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಸುನಿಲ್ ಶೆಟ್ಟಿ ಹೇರಿಕುದ್ರು, ನಿಕಟ ಪೂರ್ವ ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ ಕುಂದಾಪುರ ಉಪಸ್ಥಿತರಿದ್ದರು. ಸನ್ಮಾನ ಸ್ವೀಕರಿಸಿದ ಡಾ. ಬಿ . ರಾಜೇಂದ್ರ ಶೆಟ್ಟಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಎಲ್ಲ ಪದಾಧಿಕಾರಿಗಳಿಗೆ ಹಾಗೂ ಸರ್ವ ಸದಸ್ಯರಿಗೆ ಕೃತಜ್ಞತೆಗಳನ್ನು ಅರ್ಪಿಸಿದರು. ಸಂಘದ ಉಪಾಧ್ಯಕ್ಷರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.