ಗಂಗೊಳ್ಳಿ(ಜು,5) : ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿಯ ಎರಡನೇ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಜುಲೈ 9 ರ ಭಾನುವಾರದಂದು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಲಿದೆ.
ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕರಾದ ಡಾ. ಗೋವಿಂದ ಬಾಬು ಪೂಜಾರಿಯವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಮಾಜಿ ಶಾಸಕರಾದ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯೆ ಸಾಧು ಬಿಲ್ಲವ, ವಾಯು ಸೇನೆಯ ನಿವೃತ್ತ ಸೈನಿಕ ಮಂಜುನಾಥ ಪೂಜಾರಿ ಮತ್ತು ಮತ್ಸ್ಯ ಉದ್ಯಮಿ ಸಂಜೀವ ಬಿಲ್ಲವ ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ಮತ್ತು ಪ್ರಸ್ತುತ ವಿದ್ಯಾರ್ಥಿಗಳು ಅಭಿನಯಿಸುವ ನರೇಂದ್ರ ಎಸ್ ಗಂಗೊಳ್ಳಿ ನಿರ್ದೇಶನದ ‘ಮರಣಿ ಮಾಂಟೆ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಗೋಪಾಲ ಪೂಜಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ನರೇಂದ್ರ ಎಸ್ ಗಂಗೊಳ್ಳಿ