ಕುಂದಾಪುರ ( ಜು:4): ಐ ಎಂ ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕುಂದಾಪುರ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆಯ “ಸಂವಾದ” ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ರವರು ಶೈಕ್ಷಣಿಕ ವರ್ಷದ ಎಲ್ಲಾ ಕಾರ್ಯಚಟುವಟಿಕೆಗಳನ್ನು ತಿಳಿಸಿ ಪೋಷಕರೊಂದಿಗೆ ಸಂವಾದ ನಡೆಸಿದರು.
ವಿದ್ಯಾರ್ಥಿಗಳ ಪೋಷಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಮಕ್ಕಳ ಬಗ್ಗೆ ಮಾಹಿತಿ ಪಡೆದುಕೊಳ್ಳುವುದರೊಂದಿಗೆ, ಸಂಸ್ಥೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊ| ಜಯಶೀಲ್ ಕುಮಾರ್ ರವರು, ಬಿಸಿಎ ವಿಭಾಗದ ಮುಖ್ಯಸ್ಥರಾದ ಪ್ರೊ| ಅಹಮದ್ ಖಲೀಲ್ ರವರು ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕಿ ಸುಮನರವರು ಕಾರ್ಯಕ್ರಮವನ್ನು ನಿರೂಪಿಸಿದರು.