ಕುಂದಾಪುರ (ಜುಲೈ 10): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಜು. 10ರಂದು ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳ ಶಿಸ್ತು ಮತ್ತು ಪ್ರಾಮಾಣಿಕತೆ ಭವಿಷ್ಯದ ಜೀವನಕ್ಕೆ ದಾರಿ ದೀಪವಾಗಲಿ, ಕಾಲೇಜಿನಲ್ಲಿ ಪಡೆದ ಸಂಸ್ಕಾರ ಮುಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ಶುಭಹಾರೈಸಿದರು.
ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ನೆಲೆಯಲ್ಲಿ ಮಾತನಾಡಿ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಮನುಷ್ಯರಾಗುವುದು ನಮ್ಮ ಕರ್ತವ್ಯ ಎಂದು ಹೇಳಿದರು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ಭಟ್ ಹಾಗೂ ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಅಂತಿಮ ಪದವಿ ವಿದ್ಯಾರ್ಥಿಗಳಾದ ಪ್ರತೀಕ್ಷಾ, ಸಪ್ತಲಾ, ಪೂರ್ಣಿಮಾ, ರೋಹನ್, ಮೇಘಾ, ಶ್ರೀರಾಮ ಹಾಗೂ ಮಹಿಮಾ ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು.ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರಿ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿ, ಶ್ರೀಮತಿ ಪ್ರೀತಿ ಹೆಗ್ಡೆ ವಂದಿಸಿದರು. ಕನ್ನಡ ಉಪನ್ಯಾಸಕಿ ರೇಷ್ಮಾ ಶೆಟ್ಟಿ ನಿರೂಪಿಸಿದರು.