ಕುಂದಾಪುರ(ಜು,25): ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ಜೂನಿಯರ್ ರೆಡ್ಕ್ರಾಸ್ ಘಟಕದ ವಿದ್ಯಾರ್ಥಿಗಳಿಗೆ ರೆಡ್ಕ್ರಾಸ್ ಸಂಸ್ಥೆ ಕುಂದಾಪುರ ಇದರ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಮಾಹಿತಿ ನೀಡಿದರು.
ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀ ಭುಜಂಗ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೆಡ್ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಶ್ರೀ ಸೀತಾರಾಮ ಶೆಟ್ಟಿ, ಕೋಶಾಧಿಕಾರಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಗಣೇಶ ಆಚಾರ್ಯ ಉಪಸ್ಥಿತರಿದ್ದರು. ಜೂನಿಯರ್ ರೆಡ್ಕ್ರಾಸ್ ಸಂಚಾಲಕರಾದ ಶ್ರೀ ದಿನಕರ ಆರ್ ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದರು.
2023-24 ನೇ ಸಾಲಿನ ಜೂನಿಯರ್ ರೆಡ್ಕ್ರಾಸ್ ಅಧ್ಯಕ್ಷರಾದ ಶ್ರೀ ಭರತ ಮತ್ತು ಕಾರ್ಯದರ್ಶಿ ಶ್ರೀ ಕನಿಷ್ಕ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಉಪನ್ಯಾಸಕ ಕಾಳಾವರ ಶ್ರೀ ಉದಯ ಕುಮಾರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಜೂನಿಯರ್ ರೆಡ್ಕ್ರಾಸ್ ಘಟಕದ ಸಂಚಾಲಕರಾದ ಉಪನ್ಯಾಸಕ ಶ್ರೀ ಶಂಕರ ನಾಯ್ಕ್ ವಂದಿಸಿದರು.