ಕುಂದಾಪುರ (ಜು,29): ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಖರಗ್ಪುರ ಪಶ್ಚಿಮ ಬಂಗಾಳದ ವಿದ್ಯಾಸಂಸ್ಥೆಗೆ 2023-24 ನೇ ಸಾಲಿನ ಬಾಹ್ಯಾಕಾಶ ಸಂಶೋಧನಾ ಶಿಕ್ಷಣದ ವಿಭಾಗದ ಎಂಜಿನಿಯರಿಂಗ್ ಪದವಿ ಶಿಕ್ಷಣ ಪಡೆಯಲು ಉಡುಪಿ ಜಿಲ್ಲೆಯಿಂದ ಪ್ರಣಮ್ಯ ಜಿ.ಎಚ್. ಆಯ್ಕೆಯಾಗಿದ್ದಾರೆ.
ಇವರು ತಮ್ಮ ಪದವಿ ಪೂರ್ವ ಶಿಕ್ಷಣವನ್ನು ಕುಂದಾಪುರ ವೆಂಕಟರಮಣ ಶಿಕ್ಷಣ ಸಂಸ್ಥೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ 7 ನೆ ರ್ಯಾಂಕ್ ಪಡೆದಿದ್ದಾರೆ.