ಹೆಮ್ಮಾಡಿ(ಆ ,10): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ 2023-24ನೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪ್ರಥಮ ಪೋಷಕ-ಶಿಕ್ಷಕರ ಸಭೆ ನಡೆಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರು ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ, ಬದಲಾದ ಪರೀಕ್ಷಾ ಪದ್ದತಿಯ ಕುರಿತು ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಈ ಕುರಿತು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿಯ ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾಗಿರುವ ಶ್ರೀ C.A.ಗೋಪಾಲಕೃಷ್ಣ ಭಟ್ ರವರು ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ C.A./C.S.ಕೋರ್ಸ್ ಗಳು ಬಹಳಷ್ಟು ಪ್ರಯೋಜನಕಾರಿ,ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಾಣಿಜ್ಯ ಕಲಿಕೆಯ ಜೊತೆ-ಜೊತೆಗೆ C.A/C.Sನಂತಹ ಕೋರ್ಸ್ ಗಳನ್ನು ಅಭ್ಯಾಸ ಮಾಡಿದರೆ ಸಾಕಷ್ಟು ಅವಕಾಶಗಳು ಲಭಿಸುತ್ತವೆ ಎನ್ನುತ್ತಾ ಸಂಪೂರ್ಣ ಮಾಹಿತಿಯನ್ನು ನೀಡಿದರು.
ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ರಮೇಶ್ ಪೂಜಾರಿ,ಬೋಧಕ ಬೋಧಕೇತರ ವೃಂದದವರು,ವಿದ್ಯಾರ್ಥಿಗಳು,ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.ಈಗಾಗಲೇ ನಡೆದ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಪೋಷಕರಿಗೆ ನೀಡಿ ಕಲಿಕಾ ಪ್ರಗತಿಯ ಕುರಿತು ಚರ್ಚಿಸಲಾಯಿತು. ಉಪನ್ಯಾಸಕ ಉದಯ್ ನಾಯ್ಕ್ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿ,ಉಪನ್ಯಾಸಕ ಅಭಿಜಿತ್ ವಂದಿಸಿದರು.