ಹೆಮ್ಮಾಡಿ(ಆ,10): ಮೊಗವೀರ ಯುವ ಸಂಘಟನೆ(ರಿ), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಉಡುಪಿ ಹಾಗೂ ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಇವರ ಸಹಬಾಗಿತ್ವದಲ್ಲಿ,ಮೊಗವೀರ ಮಹಾಜನ ಸೇವಾ ಸಂಘ(ರಿ.),ಮುಂಬೈ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇವರ ಸಹಕಾರದೊಂದಿಗೆ ವನ-ಮಹೋತ್ಸವ ಹಾಗೂ ಸಸಿ ವಿತರಣೆ ಕಾರ್ಯಕ್ರಮ ಅಗಸ್ಟ್ 06 ರಂದು ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಠಾರದಲ್ಲಿ ಜರುಗಿತು.
ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್ ಕುಂದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮೊಗವೀರ ಯುವ ಸಂಘಟನೆ (ರಿ) ,ಉಡುಪಿ ಜಿಲ್ಲೆ ಇದರ ಜಿಲ್ಲಾ ಅಧ್ಯಕ್ಷರಾದ ರಾಜೇಂದ್ರ ಸುವರ್ಣ ರವರು ಸಾಂಕೇತಿಕವಾಗಿ ಗಿಡ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೊಗವೀರ ಮಹಾಜನ ಸೇವಾ ಸಂಘ(ರಿ), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯ್ ಕುಮಾರ್ ಹಟ್ಟಿಯಂಗಡಿ, ಮಾಜಿ ಅಧ್ಯಕ್ಷರಾದ ಎಮ್ ಎಮ್ ಸುವರ್ಣ,ಶಾಖಾ ಕಾರ್ಯದರ್ಶಿ ಪ್ರಭಾಕರ್ ಏನ್ ಸೇನಾಪುರ, ಘಟಕದ ಗೌರವ ಅಧ್ಯಕ್ಷ ಉಮೇಶ್ ಬಡಾಕೆರೆ, ಸ್ತ್ರಿ ಶಕ್ತಿ ಅಧ್ಯಕ್ಷೆ ಸುಮಿತ್ರ ಆನಂದ,ಸ್ತ್ರೀ ಶಕ್ತಿಯ ನಿಯೋಜಿತ ಅಧ್ಯಕ್ಷೆ ಶ್ಯಾಮಲಾ ಗೋಪಾಲ ಇವರು ಉಪಸ್ಥಿತರಿದ್ದರು.
ಘಟಕದ ಮಾಜಿ ಅಧ್ಯಕ್ಷರಾದ ರಾಜು ಏನ್ ಶ್ರೀಯಾನ್ ಸ್ವಾಗತಿಸಿ ನಿರೂಪಿಸಿದರು. ಪ್ರಭಾಕರ್ ಸೇನಾಪುರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಘಟಕದ ಮಾಜಿ ಅಧ್ಯಕ್ಷ ಶ್ರೀ ರಾಘವೇಂದ್ರ ನೆಂಪು ಧನ್ಯವಾದ ನೆರವೇರಿಸಿದರು. ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು,ವಿವಿಧ ಘಟಕಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಕೋಟೆ ಜಾಗದಲ್ಲಿ ವಿವಿಧ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.