ಕುಂದಾಪುರ(ಆ,11): ಶ್ರೀ ಬಿ. ಎಮ್ ಸುಕುಮಾರ ಶೆಟ್ಟಿ ಯವರ ನೇತೃತ್ವದ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳು, ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ, ಉಡುಪಿ ಇವರ ವತಿಯಿಂದ ಕಂಬದಕೋಣೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 08 ರಂದು ನಡೆದ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿ, ವಿಜೇತರಾಗಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಶ್ರೀಧನ್ ಎಂ ಶೆಟ್ಟಿ, ಎಂಟನೇ ತರಗತಿಯ ಶ್ರಾವ್ಯ ಮತ್ತು ಏಳನೇ ತರಗತಿಯ ಶ್ರಾವ್ಯ, ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜೇತರನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ವಿವಿಧ ವಿಭಾಗಗಳ ಮುಖ್ಯ ಶಿಕ್ಷಕರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದಿಸಿದರು.