ಕುಂದಾಪುರ (ಆ,15): ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳು ಮತ್ತು ಪೋಕ್ಸ್ ಕಾಯ್ದೆಯ ಕುರಿತಾಗಿ ಅರಿವು ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಸತ್ರ ನ್ಯಾಯಾಲಯದ ಸರ್ಕಾರಿ ವಿಶೇಷ ಅಭಿಯೋಜಕರಾಗಿರುವಂತಹ ಶ್ರೀ ಬಿ ಎಸ್ ಕಾಳವರ್ಕರ್ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು. ಮಕ್ಕಳು ಯಾವುದೇ ಭಯವಿಲ್ಲದೆ ಪೋಕ್ರೋ ಕಾಯ್ದೆಯ ಮೂಲಕ ದೌರ್ಜನ್ಯದ ವಿರುದ್ಧ ರಕ್ಷಣೆಯನ್ನು ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ವಿದ್ಯಾರ್ಥಿ ಶ್ರೇಯಾಂಕ ಅತಿಥಿಗಳನ್ನು ಸ್ವಾಗತಿಸಿದರು. ಎನ್ಎಸ್ಎಸ್ ನಾಯಕಿ ನಿವೇದಿತಾ ಸಂಯೋಜಿಸಿದರು.
ಎನ್ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಶ್ರೀಮತಿ ವನಿತಾ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು. ಹೈಸ್ಕೂಲ್ ವಿಭಾಗದ ಉಪ ಪ್ರಾಂಶುಪಾಲರಾದಂತಹ ಕಿರಣ್ ಹೆಗಡೆ, ಎನ್ಎಸ್ಎಸ್ ಸಂಚಾಲಕರಾದ ಸುಖೇಶ ಚಂದ್ರಶೇಖರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.