ಕುಂದಾಪುರ [ಅ. 18]: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಟೆನ್ನಿಸ್ ವಿದ್ಯಾರ್ಥಿಗಳ ತಂಡ, ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಸಹಯೋಗದಲ್ಲಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಕಾರ್ಕಳದಲ್ಲಿ ಜರುಗಿದ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಭಾಗವಹಿಸಿ, ದ್ವಿತೀಯ ಸ್ಥಾನ ಪಡೆದು ವಿಜೇತರಾಗಿರುತ್ತಾರೆ.
ಏಳನೇ ತರಗತಿಯ ವಿದ್ಯಾರ್ಥಿನಿಯರಾದ ಶ್ರೇಯ, ಅಂಶು ಶೆಟ್ಟಿ ಮತ್ತು ಸಾನ್ವಿ ವಿ ಭಾಗವಹಿಸಿ, ದ್ವಿತೀಯ ಸ್ಥಾನ ಪಡೆದು, ಅಂಶು ಶೆಟ್ಟಿ ಮತ್ತು ಶ್ರೇಯ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜೇತರನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ವೀರೇಂದ್ರ ನಾಯಕ್ ಅಭಿನಂದಿಸಿದ್ದಾರೆ.