ಕುಂದಾಪುರ (ಆ, 22): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ’ವನ್ನು ಆಯೋಜಿಸಲಾಯಿತು.
ಕಾರ್ಕಳದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಶ್ರೀ ಕೆ. ರಾಜೇಂದ್ರ ಭಟ್ ಉದ್ಘಾಟಿಸಿ ವಿದ್ಯಾರ್ಥಿ ಬದುಕು ಹಸನಾಗಬೇಕಾದರೆ ನಿರ್ದಿಷ್ಟ ಗುರಿ, ಶ್ರದ್ಧೆ, ಸತತ ಪ್ರಯತ್ನ ಅಗತ್ಯ, ಆ ಮೂಲಕ ಉತ್ತಮ ಭವಿಷ್ಯ ನಿಮ್ಮದಾಗಲಿ ಎಂದು ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಪದವಿ ಶಿಕ್ಷಣಕ್ಕೆ ಸಂಸ್ಥೆಗೆ ಪಾದಾರ್ಪಣೆ ಮಾಡಿದ ವಿದ್ಯಾರ್ಥಿಗಳು ಭವಿತವ್ಯದ ಬದುಕು ಹಸನಾಗಲಿ ಎಂದು ಶುಭ ಹಾರೈಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ಪ್ರೀತಿ ಹೆಗ್ಡೆ ಸ್ವಾಗತಿಸಿ, ವಾಣಿಜ್ಯ ಉಪನ್ಯಾಸಕಿ ಶ್ವೇತಾ ವಂದಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ರೇಷ್ಮಾ ಶೆಟ್ಟಿ ನಿರೂಪಿಸಿದರು.
ಬೋಧಕ-ಬೋಧಕೇತರ ವೃಂದ, ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇಂಗ್ಲೀಷ್ ವಿಭಾಗದ ಉಪನ್ಯಾಸಕಿ ಮೋನಿಕಾ ಡಿಸೋಜಾ ಅತಿಥಿಗಳನ್ನು ಪರಿಚಯಿಸಿದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಶ್ರೀ ಪ್ರಣಮ್ ಆರ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.