ಹೆಮ್ಮಾಡಿ(ಸೆ,2): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪ್ರಥಮ ಪೋಷಕ-ಶಿಕ್ಷಕರ ಸಭೆ ಇತ್ತೀಚೆಗೆ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರ ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ, ಬದಲಾದ ಪರೀಕ್ಷಾ ಪದ್ದತಿಯ ಕುರಿತು ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಈ ಕುರಿತು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಇಲ್ಲಿಯ ಶಿಕ್ಷಣ ಸಂಯೋಜಕರಾದ ಶ್ರೀಯುತ ಸತ್ಯನಾ ಕೊಡೇರಿಯವರು ಮಾತನಾಡಿ ವಿದ್ಯಾರ್ಥಿ ಪೋಷಕರನ್ನು ಉದ್ದೇಶಿಸಿ ಮಕ್ಕಳ ಮನಸ್ಥಿತಿಯನ್ನು ಅರ್ಥೈಸಿಕೊಳ್ಳಿ,ಪದವಿಪೂರ್ವ ಶಿಕ್ಷಣಕ್ಕೆ ನಿಮ್ಮ ಮಕ್ಕಳಿಗೆ ನಿಮ್ಮಿಂದ ಸಾಧ್ಯವಾದಷ್ಟು ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಜನತಾ ಕಾಲೇಜಿನ ಪರಿಶ್ರಮದ ಕುರಿತು ಶ್ಲಾಘನೆ ವ್ಯಕ್ತಪಡಿಸಿದರು.
ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ರಮೇಶ್ ಪೂಜಾರಿ,ಬೋಧಕ ಬೋಧಕೇತರ ವೃಂದದವರು,ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.ಈಗಾಗಲೇ ನಡೆದ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಪೋಷಕರಿಗೆ ವಿತರಿಸಿ ಕಲಿಕಾ ಪ್ರಗತಿಯ ಕುರಿತು ಚರ್ಚಿಸಲಾಯಿತು.
ಉಪನ್ಯಾಸಕ ಉದಯ್ ನಾಯ್ಕ್ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.