ಕುಂದಾಪುರ(ಸೆ.10):ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ) ಮತ್ತು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಗಳಿಸಿದೆ.
ಸರಸ್ವತಿ ವಿದ್ಯಾಲಯದ ನವೀನ್, ಧರ್ಮೇಶ್,ಆರ್ಯನ್ ಚರಣ್, ಶರತ್, ಯತೀಶ್, ಸುಜನ್ ವೀರೇಶ್, ಶಮಿತ್ ,ನಾಗರಾಜ್, ಆದಿತ್ಯ ಮತ್ತು ಯುವರಾಜ್ ತಂಡದಲ್ಲಿ ಭಾಗವಹಿಸಿದ್ದರು. ಈ ತಂಡದ ಏಳು ವಿದ್ಯಾರ್ಥಿಗಳು ಉಡುಪಿ ಜಿಲ್ಲಾಮಟ್ಟದಲ್ಲಿ ಕುಂದಾಪುರದ ವಿದ್ಯಾರ್ಥಿಗಳ ತ್ರೋಬಾಲ್ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯ ಮೇಸ್ತ ಉಡುಪಿ ಜಿಲ್ಲಾಮಟ್ಟದಲ್ಲಿ ಕುಂದಾಪುರ ತಾಲೂಕಿನ ಬಾಲಕಿಯರ ತ್ರೋಬಾಲ್ ತಂಡವನ್ನು ಪ್ರತಿನಿಧಿಸಲಿದ್ದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸುನಿಧಿ ಉಡುಪಿ ಜಿಲ್ಲಾ ಮಟ್ಟದಲ್ಲಿ ಕುಂದಾಪುರ ತಾಲೂಕಿನ ಬಾಲಕಿಯರ ಕಬ್ಬಡಿ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಸೋಮವಾರ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.