ಕುಂದಾಪುರ (ಸೆ.13): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಸ್ವಚ್ಛತಾ ಪಖ್ವಾಡಾ ಯೋಜನೆಯಡಿಯಲ್ಲಿ ಸ್ವಚ್ಛ ಸಂಗಮ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾಲೇಜು ಸಮೀಪದ ಆನಗಳ್ಳಿ – ರಸ್ತೆ ದುರಸ್ತೆ, ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ವಾಸುದೇವ್ ಭಟ್, ಎನ್.ಎಸ್.ಎಸ್. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಉಪಸ್ಥಿತರಿದ್ದರು ಎನ್.ಎಸ್.ಎಸ್. ಸ್ವಯಂ ಸೇವಕರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.