ಕುಂದಾಪುರ(ಸೆ.15): ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡ ಭಾರತ ಸಂವಿಧಾನದ ಪ್ರಸ್ತಾವನೆಯ ಓದು ಕಾರ್ಯಕ್ರಮವನ್ನು ಡಾ|ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ಸೆಪ್ಟೆಂಬರ್ 15ರಂದು ಆಚರಿಸಲಾಯಿತು.
ಕಾಲೇಜಿನ ಸರ್ವಬೋಧಕ -ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು ಓದುವುದರ ಮುಖಾಂತರ ಪ್ರತಿಜ್ಞೆಗೈದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ .ಉಮೇಶ್ ಶೆಟ್ಟಿ ಹಾಗೂ ಉಪ ಪ್ರಾಂಶುಪಾಲರಾದ ಕೆ. ಚೇತನ್ ಶೆಟ್ಟಿ ಉಪಸ್ಥಿತರಿದ್ದರು.