ಗಂಗೊಳ್ಳಿ(ಸೆ.15): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿನಿ ನಿಶಾ ಬಿ ಪೂಜಾರಿ ಪೀಠಿಕೆಯನ್ನು ವಾಚಿಸಿದರು. ಪ್ರಾಂಶುಪಾಲರು ಮುಖ್ಯೋಪಾ ದ್ಯಾಯರು ಉಪನ್ಯಾಸಕರು ಶಿಕ್ಷಕರು ಮತ್ತು ವಿದ್ಯಾರ್ಥಿ ವೃಂದ ಮತ್ತು ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.