ಗಂಗೊಳ್ಳಿ( ಸೆ.16): ಭಾರತದಲ್ಲಿ ಅತಿ ಹೆಚ್ಚು ಜನರು ಮಾತನಾಡುವ ಭಾಷೆ ಹಿಂದಿ ಯಾಗಿದೆ. ಅದನ್ನು ನಮ್ಮ ರಾಷ್ಟ್ರಭಾಷೆ ಎನ್ನಲು ನಾವು ಹೆಮ್ಮೆ ಪಡಬೇಕು. ಹೊಸ ಭಾಷೆಗಳನ್ನು ಕಲಿಯುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಹಿರಿಯಡಕ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿಂದಿ ಭಾಷಾ ಉಪನ್ಯಾಸಕರಾದ ಅನಂತರಾಮ ನಾಯಕ್ ಅಭಿಪ್ರಾಯ ಪಟ್ಟರು.
ಅವರು ಕಳೆದ ಗುರುವಾರ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದರು.
ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂಸಿ ಅಧ್ಯಕ್ಷತೆ ವಹಿಸಿದ್ದರು. ಹಿಂದಿ ಭಾಷಾ ಉಪನ್ಯಾಸಕ ನಾರಾಯಣ ಈ ನಾಯ್ಕ್ ಪ್ರಾಸ್ತಾವಿಕ ಮಾತುಗಳಾಡಿದರು. ಮೊಹಮ್ಮದ್ ಅಬ್ರಾರ್ ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕ ಭಾಸ್ಕರ್ ಶೆಟ್ಟಿ, ಪ್ರಾರ್ಥಿಸಿದರು. ನಾಗೇಂದ್ರ ಅತಿಥಿ ಪರಿಚಯ ಮಾಡಿದರು. ವಿದ್ಯಾರ್ಥಿನಿ ಸಂಜನಾ ಎಸ್ ನಾಯ್ಕ್ ಕಾರ್ಯಕ್ರಮವನ್ನು ನಿರೂಪಿಸಿದರು.ಶಬರೀಶ ವಂದಿಸಿದರು.