ಕುಂದಾಪುರ(ಸೆ,17): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ 1864 ವಿದ್ಯಾರ್ಥಿಗಳು ಮತ್ತು ಉಪಪ್ರಾಂಶುಪಾಲರಾದ ಶ್ರೀ ಕಿರಣ ಹೆಗ್ಡೆ, ಉಪನ್ಯಾಸಕರು, ಅಧ್ಯಾಪಕರು ಭಾಗವಹಿಸಿದರು. ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಉಪನ್ಯಾಸಕರಾದ ಶ್ರೀ ಉದಯ ಕುಮಾರ ಶೆಟ್ಟಿ ಬೋಧಿಸಿದರು.