ಕುಂದಾಪುರ (ಸೆ, 20): ಕಾಲೇಜಿನಲ್ಲಿ ನಡೆಯುವ ವಿವಿಧ ವಿಸ್ತರಣಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಬೇಕು. ಶೈಕ್ಷಣಿಕ ಸಂಸ್ಥೆಯೊoದು ಪಠ್ಯ ಕೇಂದ್ರಿತ ತಾಣವಾಗದೆ, ಪ್ರಾಯೋಗಿಕ ಕೇಂದ್ರವಾಗಿ, ಕಲಿಕೆಗಳಲ್ಲಿ ಅಂತಸ್ಥವಾಗಿರುವ ಗ್ರಹಿಕೆ ಹಾಗೂ ಅಭಿವ್ಯಕ್ತಿ ಸಾಮರ್ಥ್ಯವನ್ನು ಬಲಗೊಳಿಸಿದಾಗಲೇ ವಿದ್ಯಾರ್ಥಿ ಸಮುದಾಯ ಶಕ್ತಿಯಾಗಿ ರೂಪುಗೊಳ್ಳಲು ಸಾಧ್ಯ ಎಂದು ನಿವೃತ್ತ ಇಂಗ್ಲೀಷ್ ಪ್ರಾಧ್ಯಾಪಕಿ ಡಾ| ಪಾರ್ವತಿ ಜಿ. ಐತಾಳ್ ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ಹದಿನೇಳು ವಿವಿಧ ವೇದಿಕೆಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಪೂರ್ವ ಪರಿಚಯ’ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು., ವಿವಿಧ ವೇದಿಕೆಗಳ ಮುಖ್ಯ ಸಂಯೋಜಕ, ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಿವಿಧ ವೇದಿಕೆಗಳ ಸಂಯೋಜಕ, ನಿರ್ವಹಣಾ ವಿಭಾಗದ ಸಹ ಪ್ರಾಧ್ಯಾಪಕ ಶ್ರೀ ಹರೀಶ್ ಬಿ. ವಂದಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪೂಜಾ ಅತಿಥಿಗಳನ್ನು ಪರಿಚಯಿಸಿದರು. ಎನ್.ಎಸ್.ಎಸ್. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಶ್ರೇಯಾ ಖಾರ್ವಿ ಕಂಚುಗೋಡು ಪ್ರಾರ್ಥಿಸಿದರು.