ಕುಂದಾಪುರ (ಸೆ.22): ಜೈಪುರದ ಐಐಎಸ್ ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಏಕ್ ಭಾರತ್ ಶ್ರೇಷ್ಠ ಭಾರತ್ ಕಾರ್ಯಕ್ರಮದಡಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಹಮ್ಮಿಕೊಂಡ ರಾಷ್ಟ್ರಮಟ್ಟದ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಡಾ| ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಸ್ವಯಂಸೇವಕಿ ಶ್ರೇಯ ಖಾರ್ವಿ ಪ್ರಥಮ ಸ್ಥಾನ ಪಡೆದಿದ್ದಾರೆ.
ದೇಶದ ವಿವಿಧ ವಿಶ್ವವಿದ್ಯಾನಿಲಯದ ಕಾಲೇಜುಗಳ ಎನ್ಎಸ್ಎಸ್ ಸ್ವಯಂಸೇವಕರು ಭಾಗವಹಿಸಿದ ಈ ರಾಷ್ಟ್ರಮಟ್ಟದ ಈ ಸ್ಪರ್ಧೆಯಲ್ಲಿ ನಮ್ಮ ಸಂಸ್ಥೆಯ ಎನ್ಎಸ್ಎಸ್ ಸ್ವಯಂಸೇವಕಿ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಕೆ ಉಮೇಶ್ ಶೆಟ್ಟಿತಿಳಿಸಿದ್ದಾರೆ.
ಕಾಲೇಜಿನ ಉಪ ಪ್ರಾಂಶುಪಾಲರು ಹಾಗೂ ಎನ್ಎಸ್ಎಸ್ ಘಟಕದ ಕಾರ್ಯಕ್ರಮ ಅಧಿಕಾರಿಗಳಾದ ಚೇತನ್ ಶೆಟ್ಟಿ ಕೊವಾಡಿ, ಹಾಗೂ ಇನ್ನೋರ್ವ ಕಾರ್ಯಕ್ರಮ ಅಧಿಕಾರಿ ದೀಪ ಪೂಜಾರಿ ಹಾಗೂ ಕಾಲೇಜಿನ ಬೋಧಕ ಬೋಧಕರ ಪುರಂದದವರು ಶ್ರೇಯ ಖಾರ್ವಿಗೆ ಅಭಿನಂದನೆ ಸಲ್ಲಿಸಿದ್ದಾರೆ.