ಕುಂದಾಪುರ (ಸೆ.23): ವಿದ್ಯಾರ್ಥಿಗಳು ಜೀವನ ಮೌಲ್ಯ, ಸಂಸ್ಕಾರ, ಆದರ್ಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾಜಮುಖಿ ಕಾರ್ಯಗಳಿಂದ ಗುರುತಿಸಿಕೊಳ್ಳುವಂತಾಗಬೇಕು. ಇದರಿಂದ ಶಿಕ್ಷಣ ಸಂಸ್ಥೆಗಳು ಕಲಿಸಿದ ವಿದ್ಯೆಗೆ ಸಾರ್ಥಕತೆ ದೊರೆಯುತ್ತದೆ. ಆ ಮೂಲಕ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯೊoದರ ರಾಯಬಾರಿಗಳಾಗಬೇಕು ಎಂದು ಕಾಲೇಜು ಗವನಿಂಗ್ ಕೌನ್ಸಿಲ್ ಸದಸ್ಯ, ಪತ್ರಕರ್ತ ಶ್ರೀ ಕೆ.ಸಿ. ರಾಜೇಶ್ ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಫ್ರೇಶ್ ರ್ಸ್ ಡೇ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ಪ್ರೀತಿ ಹೆಗ್ಡೆ ವಂದಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ರೇಷ್ಮಾ ಶೆಟ್ಟಿ ನಿರೂಪಿಸಿದರು.